Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : TETʼಗೆ ಅಧಿಸೂಚನೆ ಪ್ರಕಟ

ಬೆಂಗಳೂರು : ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ನಿರೀಕ್ಷೆಯಲ್ಲಿದ್ದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಟಿಇಟಿ ಪರೀಕ್ಷೆಯ ಅಧಿಸೂಚನೆ ಹೊರಬಿದ್ದಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ. ಅಕ್ಟೋಬರ್ 23 ರಿಂದ ನವೆಂಬರ್ 9 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಟಿಇಟಿ ಪರೀಕ್ಷೆಗೆ ಸಜ್ಜಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Tags:
error: Content is protected !!