ಬೆಂಗಳೂರು : ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ನಿರೀಕ್ಷೆಯಲ್ಲಿದ್ದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಟಿಇಟಿ ಪರೀಕ್ಷೆಯ ಅಧಿಸೂಚನೆ ಹೊರಬಿದ್ದಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ. ಅಕ್ಟೋಬರ್ 23 ರಿಂದ ನವೆಂಬರ್ 9 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಟಿಇಟಿ ಪರೀಕ್ಷೆಗೆ ಸಜ್ಜಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…