ರಾಜ್ಯ

ಬಾಡಿಗೆದಾರರಿಗೆ ಶುಭ ಸುದ್ದಿ- ಗೃಹಜ್ಯೋತಿಗೆ ಡಿ-ಲಿಂಕ್

ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ  ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್‌.ಆರ್‌. ನಂಬರ್‌ನೊಂದಿಗೆ ಆಧಾರ್‌ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್‌ ಮಾಡಿಕೊಳ್ಳಬಹುದಾಗಿದೆ.

ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್‌ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.

ಪ್ರಸ್ತುತ ಡಿ-ಲಿಂಕ್‌ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್‌ ಬಳಕೆಗೆ ಅಡ್ಜೆಸ್ಟ್‌ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್‌ ಲಿಂಕ್‌ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ.

ಡಿ-ಲಿಂಕ್‌ ಮಾಡುವುದು ಹೇಗೆ…?

ಡಿ-ಲಿಂಕ್‌ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್‌’ ಲಿಂಕ್‌ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್‌ ಕೂಡ ಮಾಡಬಹುದು. ಅಥವಾ ನೇರವಾಗಿ  https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್‌ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್‌ ಓಪನ್‌ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್‌ ಲಿಂಕ್‌ ಕ್ಲಿಕ್‌ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್‌ ಪಡೆಯುವ ಮುನ್ನ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

40 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago