ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕ್ಯಾನ್ಸರ್ ರೋಗ ಹೆಚ್ಚಿನ ಜನರಿಗೆ ಕಂಡು ಬರುತ್ತಿದೆ. ಹೀಗಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಓಪನ್ ಆಗಲಿದೆ. ಬಡವರಿಗೆ ಅನುಕೂಲ ಆಗಲಿ ಎಂದು ಡೇ ಕೇರ್ ಕೀಮೋಥೆರಪಿ ಓಪನ್ ಆಗಲಿದೆ ಎಂದರು.
ನಾಳೆ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಪ್ರಾರಂಭಿಸುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರೇ ಮೈಸೂರಿನಲ್ಲಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕ್ಯಾನ್ಸರ್ ಪತ್ತೆಯಾಗಿದೆ ಅನ್ನುವವರು ಕೀಮೋಥೆರಪಿ ಪಡೆಯಬಹುದು. ಇದಕ್ಕಾಗಿ ಎಲ್ಲಾ ರೀತಿಯ ತರಬೇತಿ ಮಾಡಲಾಗಿದೆ. ಪ್ರತಿ ಆಸ್ಪತ್ರೆಗಳಲ್ಲಿ 10 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.





