ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.
ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಆಗಿರಲಿಲ್ಲ. ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಎಲ್ಲಾ ಜಿಲ್ಲೆಗಳಿಗೂ 11ನೇ ಕಂತಿನ ಹಣ ಬಿಡುಗಡೆಯಾಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಮೂಲಕ ಗೃಹಲಕ್ಷ್ಮೀಯರಿಗೆ ಗೌರಿ-ಗಣೇಶ ಹಬ್ಬಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೋ ಎಂದು ಕಾದು ಕುಳಿತಿದ್ದ ಯಜಮಾನಿಯ ಮುಖದಲ್ಲಿ ಸಂತಸ ಮನೆಮಾಡಿದೆ.