ರಾಜ್ಯ

ಗೌರಿ ಗಣೇಶ ಹಬ್ಬಕ್ಕೆ ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌

ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.

ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಆಗಿರಲಿಲ್ಲ. ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಎಲ್ಲಾ ಜಿಲ್ಲೆಗಳಿಗೂ 11ನೇ ಕಂತಿನ ಹಣ ಬಿಡುಗಡೆಯಾಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಮೂಲಕ ಗೃಹಲಕ್ಷ್ಮೀಯರಿಗೆ ಗೌರಿ-ಗಣೇಶ ಹಬ್ಬಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೋ ಎಂದು ಕಾದು ಕುಳಿತಿದ್ದ ಯಜಮಾನಿಯ ಮುಖದಲ್ಲಿ ಸಂತಸ ಮನೆಮಾಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

11 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

55 mins ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

1 hour ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

2 hours ago