ರಾಜ್ಯ

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2,000 ಹೆಚ್ಚುವರಿ ಬಸ್‌ ವ್ಯವಸ್ಥೆ

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.

ಕೆಎಸ್‌ಆರ್‌ಟಿಸಿ ನಿಗಮವು ದಸರಾ ರಜೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್‌ ಸೌಲಭ್ಯ ಮಾಡಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದೆ. ಅಲ್ಲದೇ ಜಲದರ್ಶಿನಿ, ಗಿರಿದರ್ಶಿನಿ ಮತ್ತು ದೇವದರ್ಶಿನಿಗಳ ವಿಶೇಷ ಪ್ರವಾಸ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೆಚ್ಚುವರಿ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಕಾರ್ಯ ನಿರ್ವಹಿಸಲಿವೆ. ಮೈಸೂರು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್‌.ನಗರ ಹಾಗೂ ಗುಂಡ್ಲುಪೇಟೆ ಸೇರಿದಂತೆ ಇನ್ನಿತರ ಪ್ರವಾಸಿ ತಾಣದ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ವಿಶೇಷ ಬಸ್‌ಗಳಿಗೆ ಗಿರಿದರ್ಶಿನಿ ಎಂದು ಹೆಸರಿಸಲಾಗಿದ್ದು, ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್‌ ಪ್ರವಾಸದಂತೆ ಬಂಡಿಪುರ, ಬಿ.ಆರ್‌.ಹಿಲ್ಸ್‌, ಗೋಪಾಲಸ್ವಾಮಿ ಬೆಟ್ಟ ಹಾಗೂ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುವ ಅವಕಾಶ ಸೌಲಭ್ಯವನ್ನು ಒದಗಿಸಲಾಗಿದೆ. ಮಕ್ಕಳಿಗೆ 250 ರೂ. ಹಾಗೂ ಹಿರಿಯರಿಗೆ 400 ರೂ.ಗಳ ಮಿತಿಯಲ್ಲಿ ಟಿಕೆಟ್‌ ದರವನ್ನು ನಿಗದಿಪಡಿಸಲಾಗಿದೆ.

ಈ ಹೆಚ್ಚುವರಿ ಬಸ್‌ಗಳಲ್ಲಿ ಸಂಚರಿಸಲು ನಾಲ್ಕು ಅಥವಾ ಅದಕ್ಕಿಂತ ಅಧಿಕ ಪ್ರಯಾಣಿಕರು ಒಟ್ಟಿಗೆ ಮುಂಚಿತವಾಗಿ ಟಿಕೆಟ್‌ ಖರೀದಿಸಿದ್ದರೆ ಶೇ.5 ರಷ್ಟು ಮತ್ತು ಪ್ರವಾಸಕ್ಕೆ ಒಂದು ಕಡೆಯಿಂದ ಹೋಗಿ ಬರುವುದಕ್ಕೆ ಒಟ್ಟಿಗೆ ಟಿಕೆಟ್‌ ಖರೀದಿಸಿದ್ದರೆ ಶೇ.10ರಷ್ಟು ಪ್ರಯಾಣದ ದರದಲ್ಲಿ ರಿಯಾಯಿತಿ ಸಿಗಲಿದೆ. ಆಸ್ತಕರು www.ksrtc.karnataka.gov.in ವೈಬ್‌ಸೈಟ್‌ ಅಥವಾ ಮೊಬೈಲ್‌ ಮುಖಾಂತರ ಇ-ಟಿಕೆಟನ್ನು ಕಾಯ್ದಿರಿಸಬಹುದು ಎಂದು ಮಾಹಿತಿ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

9 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

10 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

10 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

10 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

10 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

10 hours ago