ಬೆಂಗಳೂರು: ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ರೈತರನ್ನು ಆರ್ಥಿಕವಾಗಿ ಕೈಹಿಡಿಯುವ ಬೆಳೆ ವಿಮೆ ಯೋಜನೆಗೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನ್ನದಾತರು ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಜೂನ್.9ರವರೆಗೆ 5,87,741 ರೈತರು 12,29,741 ಹೆಕ್ಟೇರ್‌ಗೆ ವಿಮೆ ಮಾಡಿಸಿದ್ದಾರೆ. ಕಳೆದ ವರ್ಷ ಈ ಅವಧಿಯಲ್ಲಿ 2 ಲಕ್ಷ ರೈತರು ಮಾತ್ರ ವಿಮೆ ಮಾಡಿಸಿದ್ದರು. ಬರಗಾಲ, ಭಾರೀ ಮಳೆಯ ಆತಂಕದಿಂದಾಗಿ ಬೆಳೆ ವಿಮೆ ಮಾಡಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಾ ಹೋಗುತ್ತಿರುವುದು ಕಂಡುಬಂದಿದೆ.
ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ವಿಮೆ ಮಾಡಿಸಲು ರೈತರು ಮುಂದಾಗಿದ್ದಾರೆ.
36 ವಿಧದ ಆಹಾರ, ಎಣ್ಣೆಕಾಳು, ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಕೃಷಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಎಣ್ಣೆಕಾಳು ಬೆಳೆಗಳಿಗೆ ಶೇ.2ರಷ್ಟು ಮತ್ತು ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5ರಷ್ಟು ಪ್ರೀಮಿಯಂ ಅನ್ನು ರೈತರು ಪಾವತಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನುಳಿದ ಪ್ರೀಮಿಯಂ ಮೊತ್ತ ಪಾವತಿಸಲಿವೆ. ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಬೆಳೆ ಮತ್ತು ಜಿಲ್ಲಾವಾರು ಅಂತಿಮ ದಿನಾಂಕವನ್ನು ಪಡೆಯಬಹುದು.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…