Mysore
21
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಆಟೋ ಗುದ್ದಿರುವ ಘಟನೆ ನಡೆದಿದೆ.

ದ್ರಾವಿಡ್‌ ಅವರು ಇಂಡಿಯನ್‌ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ವೇಳೆ ದ್ರಾವಿಡ್‌ ಅವರು ಕಾರನ್ನು ನಿಲ್ಲಿಸಿದ್ದಾಗ ಹಿಂದಿನಿಂದ ಬಂದ ಗೂಡ್ಸ್‌ ಆಟೋ ರಿಕ್ಷಾ ಗುದ್ದಿದೆ.

ಘಟನೆ ನಡೆಯುತ್ತಿದ್ದಂತೆ ದ್ರಾವಿಡ್‌ ಕಾರಿನಿಂದ ಕೆಳಗಡೆ ಇಳಿದು ಪರಿಶೀಲನೆ ನಡೆಸಿದ್ದಾರೆ. ನಂತರ ಆಟೋ ಚಾಲಕನನ್ನು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಇನ್ನು ರಾಹುಲ್‌ ದ್ರಾವಿಡ್‌ ರಿಕ್ಷಾ ಚಾಲಕನ ಜೊತೆ ಮಾತನಾಡಿರುವ ವಿಡಿಯೋವನ್ನು ಯಾರೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು, ಈ ವಿಡಿಯೋ ಇದೀಗ ಫುಲ್‌ ವೈರಲ್‌ ಆಗಿದೆ.

Tags: