Excise Minister RB Thimmapur warns
ಬೆಂಗಳೂರು: ಕ್ಲೋರಲ್ ಹೈಡ್ರೇಟ್ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತವಾದ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡುವುದಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರು, ಬಳ್ಳಾರಿ ಜಿಲ್ಲೆಯಲ್ಲಿ ನೆರೆಯ ಆಂಧ್ರಪ್ರದೇಶದಿಂದ ಸೇಂದಿಯನ್ನು ಅಕ್ರಮವಾಗಿ ತಂದು ಮಾರಾಟ ಮಾಡಲಾಗುತ್ತಿದೆ. ಇದು ಮನುಷ್ಯರು ಬಳಕೆ ಮಾಡಲು ಯೋಗ್ಯವಲ್ಲ ಎಂದು ಪ್ರಯೋಗಾಲಯದ ವರದಿ ಸ್ಪಷ್ಟಪಡಿಸಿದೆ. ಸರ್ಕಾರ ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಆರ್.ಬಿ.ತಿಮ್ಮಾಪುರ ಅವರು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಿಗೆ ತರಲಾಗುತ್ತಿದೆ. ಸಿಎಚ್ ಎಂಬ ಸಣ್ಣ ಪೊಟ್ಟಣ್ಣದ ಪೌಡರನ್ನು ಸೇಂದಿಗೆ ಮಿಶ್ರಣ ಮಾಡಿ ಐದಾರು ಲೀಟರ್ ತಯಾರಿಸಲಾಗುತ್ತಿದೆ. ಇದರ ವಿರುದ್ಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವ್ಯಾಪಕ ಜನಜಾಗೃತಿ ಮಾಡಿದ್ದೇವೆ ಎಂದರು.
ಈವರೆಗೂ ಅಕ್ರಮ ಸೇಂದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ 160 ಪ್ರಕರಣಗಳನ್ನು ದಾಖಲಿಸಿ 160 ಜನರನ್ನು ಬಂಧಿಸಲಾಗಿದೆ. 19691 ಲೀಟರ್ ಮದ್ಯವನ್ನು ವಶಪಡಿಸಿಕೊಂಡು, 121 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಸದರಿ ಆರೋಪಿಗಳ ವಿರುದ್ಧ, ಗೂಂಡಾ ಕಾಯ್ದೆ ಬಳಕೆ ಮಾಡಲು ಚರ್ಚೆಗಳು ನಡೆಯುತ್ತಿವೆ. ರಾಯಚೂರಿನಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಸಲಾಗಿದೆ. ಅಕ್ರಮವಾಗಿ ಸೇಂದಿ ಮಾರುವ 25 ಮಂದಿಯನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…