Mysore
23
overcast clouds

Social Media

ಬುಧವಾರ, 27 ಮೇ 2026
Light
Dark

ಮುಜರಾಯಿ ದೇವಾಲಯಗಳಲ್ಲಿ ನಾಳೆ ಗೋಪೂಜೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ದಿನ (ಬಲಿಪಾಡ್ಯಮಿ) ದಂದು ಗೋಪೂಜೆ ನೆರವೇರಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.

ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ( ಬಲಿಪಾಡ್ಯಮಿ) ದಿನದಂದು ವಿಶೇಷ ಪೂಜೆ ಸಲ್ಲಿಸುವಂತೆ ನಿರ್ದೇಶನ ನೀಡಲಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಜೀವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಅಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ, ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚನೆ ನೀಡಲಾಗಿದೆ.

Tags:
error: Content is protected !!