ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ದಿನ (ಬಲಿಪಾಡ್ಯಮಿ) ದಂದು ಗೋಪೂಜೆ ನೆರವೇರಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ( ಬಲಿಪಾಡ್ಯಮಿ) ದಿನದಂದು ವಿಶೇಷ ಪೂಜೆ ಸಲ್ಲಿಸುವಂತೆ ನಿರ್ದೇಶನ ನೀಡಲಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಜೀವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಅಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ, ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚನೆ ನೀಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…