Mysore
21
overcast clouds
Light
Dark

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ.

ಟಿ.ಜೆ.ಅಬ್ರಹಾಂ ಹಾಗೂ ಸ್ನೇಹಮಹಿ ಕೃಷ್ಣ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಎಂ ವಿರುದ್ದದ ವಿಚಾರಣೆಗೆ ಶುಕ್ರವಾರ ರಾತ್ರಿ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.

ಮೂಡಾ ಹಗರಣದ ಹಿನ್ನೆಲೆ ಜೂನ್ 26 ರಂದು ರಾಜ್ಯಪಾಲರಿಗೆ ದೂರು ನೀಡಿದ್ದ ಟಿ.ಜೆ.ಅಬ್ರಹಾಂ. ಅರ್ಜಿ ಒಪ್ಪಿಕೊಂಡು ಜೂನ್ 27 ರಂದು ಸಿಎಂಗೆ ಷೋಕಾಸ್ ನೋಟಿಸ್ ನೀಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಈ ಷೋಕಾಸ್ ನೋಟಿಸ್ ಸರಿಯಲ್ಲ ಅದನ್ನು ಹಿಂಪಡೆಯಿರಿ ಎಂದು ರಾಜ್ಯಪಾಲರಿಗೆ ಸಚಿವ ಸಂಪುಟ ಸಲಹೆ ನೀಡಿತ್ತು. ಆಗಿದ್ದರೂ ರಾಜಪಾಲರು ವಿಚಾರಣೆಗೆ ಅನುಮತಿ ನೀಡಿರುವುದು ಕಾಂಗ್ರೆಸ್‌ ಪಾಲಯದಲ್ಲಿ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.