ರಾಜ್ಯ

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ ವೇತನ (ಅರಿಯರ್ಸ್) ಪಾವತಿಸಲು ಅನುಮೋದನೆ ನೀಡಿದೆ. ಇದರೊಂದಿಗೆ 2025ರ ಏಪ್ರಿಲ್ 1ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ ಸೂಚಿಸಿದೆ. ಇದರಿಂದ ನೌಕರರು ನಡೆಸಲುದ್ದೇಶಿಸಿದ್ದ ಬೃಹತ್ ಪ್ರತಿಭಟನೆ ರದ್ದಾಗುವ ಸಾಧ್ಯತೆ ಇದೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೌಕರರು ಫೆಬ್ರವರಿ 19ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ಮತ್ತು ಫೆಬ್ರವರಿ 20ರಿಂದ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಒತ್ತಡಕ್ಕೆ ಸರ್ಕಾರ ಮಣಿದಿದೆ.

ಕಾರ್ಮಿಕ ಸಂಘಟನೆಗಳು ಈ ನಿರ್ಧಾರಕ್ಕೆ ಸ್ವಾಗತಿಸುತ್ತಿವೆಯಾದರೂ, ಉಳಿದ 12 ತಿಂಗಳ ಹಿಂಬಾಕಿ ಮತ್ತು ವೇತನ ಹೆಚ್ಚಳದ ಪ್ರಮಾಣದ ಬಗ್ಗೆ ಇನ್ನಷ್ಟು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ನಿರ್ಧಾರವು ಸಾರಿಗೆ ನಿಗಮಗಳ ಸಿಬ್ಬಂದಿಗೆ ದೀರ್ಘಕಾಲದ ಆರ್ಥಿಕ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ ಒದಗಿಸಿದ್ದು, ಮುಂದಿನ ಚರ್ಚೆಗಳಲ್ಲಿ ಸಂಪೂರ್ಣ ಬೇಡಿಕೆಗಳ ಪೂರೈಕೆಗೆ ಒತ್ತಾಯಿಸಲಾಗುವುದು ಎಂದು ಸಂಘಟನೆಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago