ರಾಜ್ಯ

ಕೋರ್ಟ್‌ ತೀರ್ಪಿಗೆ ಸರ್ಕಾರ ಬದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೋರ್ಟ್‌ ತೀರ್ಪಿಗೆ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಮೊದಲು ಕೋರ್ಟ್‌ ಆದೇಶ ಬರಲಿ. ಸರ್ಕಾರ ಅದಕ್ಕೆ ಬದ್ಧವಾಗಿರುತ್ತದೆ. ಸಂಘಟನೆಯವರೂ ಕೂಡ ಕೋರ್ಟ್‌ ಆದೇಶಕ್ಕೆ ಬದ್ಧರಾಗಿರಬೇಕು. 38 ತಿಂಗಳ ಹಿಂಬಾಕಿ ಕೇಳುತ್ತಿದ್ದಾರೆ. ಅದು ಹಿಂದಿನ ಸರ್ಕಾರದ ಆದೇಶ. 14 ತಿಂಗಳ ಹಣ ನೀಡುವುದಕ್ಕೆ ಸಿಎಂ ಸಿದ್ಧರಿದ್ದಾರೆ. ಆದರೂ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಇನ್ನು ಸಾರಿಗೆ ನೌಕರರ ಮುಷ್ಕರದಿಂದ ಜನರಿಗೆ ಅನಾನುಕೂಲವಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 hour ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago