Stop Tug-of-War Over Leadership Debate; Focus on Development Instead
- ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ, ಐಟಿ&ಬಿಟಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ
- ಐಬಿಎಂ, ಎಲ್&ಟಿ, ಎಡಬ್ಲೂಎಸ್, ಇನ್ಪೋಸಿಸ್,ಐಐಎಸ್‌ಸಿ, ಐಐಐಟಿ ಧಾರವಾಡ, ಕ್ಯೂಪೈಎಐ, ಎಕ್ಸೀಡ್, ಜೆಎನ್‌ಸಿಎಎಸ್‌ಆರ್ ಸೇರಿದಂತೆ ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಭಾಗಿ
- ರೋಡ್ ಮ್ಯಾಪ್ ಸಿದ್ದಪಡಿಸಲು ಟಾಸ್ಕ್ ಫೊರ್ಸ್ ರಚನೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ
ಬೆಂಗಳೂರು : ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಬದ್ದವಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಸಚಿವರು ಭರವಸೆ ನೀಡಿದರು.
ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯದಲ್ಲೇ ರೋಡಮ್ಯಾಪ್ ಕೂಡಾ ಸಿದ್ದವಾಗಲಿದ್ದು, ಈ ಹಿನ್ನಲೆಯಲ್ಲಿ ಇಂದು ವಿಧಾನಸೌಧದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಕ್ವಾಂಟಮ್ ಕ್ಷೇತ್ರದ ಪ್ರಮುಖ ಕಂಪನಿಗಳ ಪ್ರತಿನಿಧಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು, ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್, ಐಟಿ&ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಈ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಕ್ವಾಂಟಮ್ ಕ್ಷೇತ್ರದ ಪ್ರಮುಖ ಪಾಲುದಾರರಾಗುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಹೊಂದಿದೆ. ಉತ್ತಮ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳಿಗೆ ಪೂರಕವಾದ ನೀತಿ ನಿಯಮಗಳು, ಅಗತ್ಯವಾದ ಸೌಕರ್ಯಗಳು, ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವಂತಹ ಕೈಗಾರಿಕೆಗಳು, ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲವನ್ನು ಹೊಂದಿದೆ. ಇಂತಹ ಸೌಲಭ್ಯ ಬೇರೆ ರಾಜ್ಯಗಳಲ್ಲಿ ಇಲ್ಲ. ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ. ಕ್ವಾಂಟಮ್ ಕ್ಷೇತ್ರದ ಉತ್ತಮ ಬುನಾದಿ, ಉತ್ತಮ ಸೌಕರ್ಯಗಳು ಈಗಾಗಲೇ ಪ್ರಾರಂಭಿಸಲಾಗಿದೆ. ಈ ರಾಜ್ಯದಲ್ಲಿ ಈ ಕ್ಷೇತ್ರ ಇನ್ನಷ್ಟು ಅಭಿವೃದ್ದಿಗೊಳ್ಳಲು ಕೈಗಾರಿಕೆಗಳಿಗೆ ಅಗತ್ಯವಿರುವ ಭೂಮಿ ಹಾಗೂ ಪೂರಕ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಕ್ವಾಂಟಮ್ ಕಂಪನಿಗಳ ಪ್ರತಿನಿಧಿಗಳು ತಿಳಿಸಿದರು.
ಕೈಗಾರಿಕಾ ಸಚಿವರಾದ ಎಂ. ಬಿ ಪಾಟೀಲ್ ಮತನಾಡಿ, ” ಕ್ವಾಂಟಮ್ ತಂತ್ರಜ್ಞಾನ ಮತ್ತು ರಕ್ಷಣಾ ವಲಯದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರಬೇಕು ಎಂಬುದು ನಮ್ಮ ಗುರಿ. ಉದ್ಯಮಗಳ ಬೆಳವಣಿಗೆಗೆ ಭೂಮಿ, ಮೂಲಸೌಕರ್ಯ ಸೇರಿದಂತೆ ಎಲ್ಲಾ ರೀತಿಯ ಬೆಂಬಲವನ್ನು ಕರ್ನಾಟಕ ಸರ್ಕಾರ ನೀಡಲು ಸಿದ್ಧವಿದೆ. ಕೈಗಾರಿಕೆಗಳ ಸ್ಥಾಪನೆಗೆ, ಅದರ ಅಭಿವೃದ್ದಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವ ನಾವು ಸಿದ್ದರಿದ್ದು ಕೈಗಾರಿಕೋದ್ಯಮಿಗಳು ಅಗತ್ಯವಿರುವಂತಹ ಬೇಡಿಕೆಗಳ ಪಟ್ಟಿಯನ್ನು ನೀಡುವಂತೆ ತಿಳಿಸಿದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಮಾತನಾಡಿ, ಕರ್ನಾಟಕ ಸರ್ಕಾರ ನಮ್ಮ ರಾಜ್ಯವನ್ನು ಕ್ವಾಂಟಮ್ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದೆ. ಈ ಹಿನ್ನಲೆಯಲ್ಲಿ ಇಂದು ಕೈಗಾರಿಕೆ, ಐಟಿ&ಬಿಟಿ ಸಚಿವರೊಂದಿಗೆ ಹಾಗೂ ಕ್ವಾಂಟಮ್ ಕ್ಷೇತ್ರದ ಪ್ರತಿನಿಧಿಗಳೊಂದಿಗೆ ಮೊದಲ ಹಂತದ ಸಭೆಯನ್ನು ನಡೆಸಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರಕಾರ ಈ ನಿಟ್ಟಿನಲ್ಲಿ ರೋಡ್ ಮ್ಯಾಪ್ ತಯಾರಿಸಲಿದೆ. ಈ ರೋಡ್ ಮ್ಯಾಪ್ ತಯಾರಿಸಲು ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಅಲ್ಲದೇ ನಮ್ಮ ಸರಕಾರ ಅಗತ್ಯವಿರುವ ನೀತಿ ನಿಯಮಗಳನ್ನು ರೂಪಿಸಲು ಬದ್ದವಾಗಿದೆ. 2035 ರ ವೇಳೆಗೆ ಕ್ವಾಂಟಮ್ ಅಡ್ವಾಂಟೇಜ್ ಡ್ರಿವನ್ ಎಕಾನಮಿ ಆಗುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕ್ವಾಂಟಮ್ ಇಂಡಿಯಾ ಸಮಾವೇಶವನ್ನು ಜುಲೈ 31 ಹಾಗೂ ಆಗಸ್ಟ್ 1 ರಂದು ಆಯೋಜಿಸಲಾಗಿದೆ ಎಂದರು.
ಐಟಿ&ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಮಾತನಾಡಿ, ಕ್ವಾಂಟಮ್ ಕ್ಷೇತ್ರ ರಾಜ್ಯದಲ್ಲಿ ಅಭಿವೃದ್ದಿಯನ್ನು ಹೊಂದುವಂತೆ ಮಾಡಲು ಮಾನವ ಸಂಪನ್ಮೂಲದ ಕೌಶಲ್ಯಾಭಿವೃದ್ದಿಯನ್ನು ಮಾಡುವುದು ಬಹಳ ಅವಶ್ಯಕವಾಗಿದೆ. ರಾಜ್ಯವನ್ನು ವಿಶ್ವ ಕ್ವಾಂಟಮ್ ಭೂಪಟದಲ್ಲಿ ಮುಂಚೂಣಿಯಲ್ಲಿರಿಸಲು ನಾವು ಎಲ್ಲಾ ರೀತಿ ಸಹಕಾರ, ಆವಿಷ್ಕಾರದ ಎಕೋಸಿಸ್ಟಮ್ ನಿರ್ಮಾಣದತ್ತ ಹೆಚ್ಚಿನ ಒತ್ತು ನೀಡಲಿದ್ದೇವೆ. ಹಂತ ಹಂತವಾಗಿ ಕ್ವಾಂಟಮ್ ಮಿಷನ್ ಮೂಲಕ, ಉದ್ಯಮ, ಅಧ್ಯಯನ ಸಂಸ್ಥೆಗಳ ಮತ್ತು ನಾವಿನ್ಯತೆಯ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದೇವೆ ಎಂದರು.
ಸಭೆಯಲ್ಲಿ ವಿಷನ್ ಗ್ರೂಪ್‌ನ ಅಧ್ಯಕ್ಷರಾದ ಕ್ರಿಸ್ ಗೋಪಾಲಕೃಷ್ಣ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಐಟಿ&ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಏಕರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಕ್ರಿಸ್ ಗೋಪಾಲಕೃಷ್ಣ, ಎಲ್&ಟಿ ಕ್ಲೌಡ್ ಸಿಟಿಓ ಸುಬ್ರಮಣ್ಯನ್ ನಟರಾಜ್, xeedQ Gmblt ಸಿಇಓ ಗೋಪಿ ಬಾಲಸುಬ್ರಮಣ್ಯನ್, ಕ್ವಾಂಟಮ್ ರಿಸರ್ಚ್ ಪಾರ್ಕ್‌ನ ಮುಖ್ಯಸ್ಥರಾದ ಪ್ರೊ. ಅರಿಂದಮ್ ಘೋಷ್, ಇನ್ಪೋಸಿಸ್ ಉಪಾಧ್ಯಕ್ಷರಾದ ಮಂಜುನಾಥ್, ಐಬಿಎಂ ನ ಅಮಿತ್ ಸಿಂಘಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…