ರಾಜ್ಯ

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಿತ್ತಾಪುರ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ
2025-26 ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ತೋಟಗಾರಿಕೆ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ತರಕಾರಿ ಬೀಜಗಳ ಕಿಟ್ ವಿತರಿಸಿ ಅವರು ಮಾತನಾಡುತ್ತಿದ್ದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ರೂ 2590 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇವೆ. ಇದರಲ್ಲಿ 656 ಕೋಟಿ ಬೆಳೆ ವಿಮೆ ಸೇರಿದೆ. ಇಷ್ಟೊಂದು ಮೊತ್ತದ ಪರಿಹಾರ ಪಡೆದುಕೊಂಡ ಜಿಲ್ಲೆ ರಾಜ್ಯದಲ್ಲಿ ಮತ್ತೊಂದಿಲ್ಲ. ಜಿಲ್ಲೆಯಲ್ಲಿ ತೊಗರಿಗೆ ನೆಟೆ ರೋಗ ಬಂದು 2 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾದಾಗ ರೂ 182 ಕೋಟಿ ಬಿಡುಗಡೆ ಮಾಡಿದ್ದೇವೆ. ಆದರೆ, ಇದೇ ತರ ಜಿಲ್ಲೆಯ ರೈತರು ನೆರೆ ಹಾಗೂ ಬರದಿಂದ ನಷ್ಟ ಅನುಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ಜಿಲ್ಲೆಗೆ ಕೇವಲ 22 ಕೋಟಿ ಮಾತ್ರ ಬಿಡುಗಡೆ ಮಾಡಿತ್ತು ಎಂದು ನೆನಪಿಸಿದರು.‌

ಕೇಂದ್ರ ಸರ್ಕಾರ ನಮ್ಮ ರೈತರ ವಿರೋಧಿ ನಿಲುವು ತೆಗೆದುಕೊಂಡು ಬಿಡುಗಡೆ ಮಾಡಬೇಕಾದ ಅನುದಾನ ತಡೆಹಿಡಿದಿದ್ದರಿಂದ ರಾಜ್ಯದ ಇಡೀ ಸಚಿವ ಸಂಪುಟ ದೆಹಲಿಯಲ್ಲಿ ಪ್ರತಿಭಟನೆ ಮಾಡಿತ್ತು. ಇತಿಹಾಸದಲ್ಲಿ ರಾಜ್ಯ ಸರ್ಕಾರವೊಂದು ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಿದ್ದು ಇದೇ ಮೊದಲು. ಅಷ್ಟಾದರೂ ಕೇಂದ್ರ ಬಗ್ಗದಿದ್ದಾಗ ಕೊನೆಗೆ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಗೆ ಅರ್ಜಿ ಹಾಕಿದಾಗ ಸುಪ್ರಿಂಕೋರ್ಟ್ ಛೀಮಾರಿ ಹಾಕಿದ್ದರಿಂದ ಅನುದಾನ ಬಿಡುಗಡೆ ಮಾಡಿತ್ತು. ಇದು ರೈತರ ಪರವಾದ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕೋಲ್ಡ್ ಸ್ಟೋರೆಜ್ ನಿರ್ಮಾಣ ಮಾಡುವ ಗುರಿ ಹೊಂದಿದ್ದೇವೆ. ಪಲ್ಸ್ ಪ್ರೋಟಿನ್ ಹಬ್ ಮಾಡುವ ಯೋಜನೆಗಳಿವೆ. ಈಗಾಗಲೇ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆ ಮಾಡುವ ಯಂತ್ರಗಳನ್ನು ಪರಿಚಯಿಸಲಾಗಿದೆ. ಇನ್ನು ಮುಂದೆಯೂ ಕೂಡಾ ತಂತ್ರಜ್ಞಾನ ಬಳಕೆ ಮಾಡಿಕೊಂಡು ರೈತರಿಗೆ ಮತ್ತಷ್ಡು ಸುಧಾರಿತ ಯಂತ್ರಗಳನ್ನು ಒದಗಿಸುಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

8 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

8 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

8 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

8 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

8 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

9 hours ago