ರಾಜ್ಯ

ಹೊರಗುತ್ತಿಗೆ ಕೈಬಿಡಲು ಸರ್ಕಾರ ಚಿಂತನೆ ; ಒಳಗುತ್ತಿಗೆಗೆ ನಿರ್ಧಾರ

ಬೆಂಗಳೂರು : ಖಾಸಗಿ ಏಜೆನ್ಸಿಗಳ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹೀಗಾಗಿ, ಹೊರಗುತ್ತಿಗೆ ವ್ಯವಸ್ಥೆ ರದ್ದು ಮಾಡಿ ಒಳಗುತ್ತಿಗೆ ವ್ಯವಸ್ಥೆ ಜಾರಿಗೆ ತರಲು ಗಂಭೀರ ಚಿಂತನೆಯನ್ನು ಸರ್ಕಾರ ನಡೆಸಿದೆ. ಹೊರಗುತ್ತಿಗೆ ನೌಕರರ ಮೇಲಿನ ದೌರ್ಜನ್ಯ ತಡೆ ಮತ್ತು ಸೇವಾ ಭದ್ರತೆ ಒದಗಿಸುವ ಸಂಬಂಧ ಸುಪ್ರೀಂಕೋರ್ಟ್‌ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ಹೊರಗುತ್ತಿಗೆ ನೌಕರರ ನೇಮಕವನ್ನು ಖಾಸಗಿ ಏಜೆನ್ಸಿಗಳ ಮೂಲಕ ಮಾಡುವುದನ್ನು ತಪ್ಪಿಸಿ ಅನ್ಯಮಾರ್ಗದ ಮೂಲಕ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿಯೊಂದನ್ನು ರಚಿಸಲಾಗಿದೆ.

ಇದನ್ನು ಓದಿ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಈ ಸಂಪುಟ ಉಪಸಮಿತಿ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಲು ಇರುವ ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ಒಳಗುತ್ತಿಗೆ ಆಧಾರದಲ್ಲಿ ನೇರವಾಗಿ ಸರ್ಕಾರ ಅಥವಾ ಸರ್ಕಾರಿ ಸಂಸ್ಥೆಗಳ ಮೂಲಕ ಸೇವೆಗೆ ಭರ್ತಿ ಮಾಡಿಕೊಳ್ಳಲು ಪರಿಶೀಲನೆ ನಡೆಸಿದೆ. ಇದರ ಸಾಧಕ-ಬಾಧಕಗಳ ಪರಿಶೀಲನೆಗಾಗಿ ಕಾರ್ಮಿಕ ಇಲಾಖೆ, ಕಾನೂನು ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿಯು ವರದಿ ನೀಡಿದ ನಂತರ ಅದನ್ನು ಪರಿಶೀಲಿಸಿ ಹೊರಗುತ್ತಿಗೆ ನೌಕರರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸಚಿವ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.

ಒಳ ಗುತ್ತಿಗೆ ಎಂದರೇನು?
ಖಾಸಗಿ ಏಜೆನ್ಸಿ ಅಥವಾ ಇನ್ಯಾವುದಾದರೂ ಸಂಸ್ಥೆ ಮೂಲಕ ನೌಕರರನ್ನು ನೇಮಿಸುವ ವ್ಯವಸ್ಥೆಯನ್ನು ಹೊರಗುತ್ತಿಗೆ ಎಂದು ಕರೆಯಲಾಗುತ್ತದೆ. ಅದರಲ್ಲಿ ನೌಕರರಿಗೆ ವೇತನ ಪಾವತಿ ಸೇರಿ ಸೌಲಭ್ಯ ನೀಡುವ ಹೊಣೆಗಾರಿಗೆ ಸರ್ಕಾರಕ್ಕಿರುವುದಿಲ್ಲ. ಖಾಸಗಿ ಸಂಸ್ಥೆಗೆ ನಿಗದಿ ಮಾಡಿರುವ ಶುಲ್ಕ ಪಾವತಿಸಿದರೆ ನೌಕರರಿಗೆ ನೀಡಬೇಕಾದ ಸೌಲಭ್ಯ ಆ ಸಂಸ್ಥೆಯೇ ನೀಡುತ್ತದೆ. ಅದೇ ಒಳ ಗುತ್ತಿಗೆ ನೌಕರರು, ಸರ್ಕಾರದಿಂದಲೇ ಗುತ್ತಿಗೆ ಆಧಾರದಲ್ಲಿ ನೇಮಕವಾಗಲಿದ್ದಾರೆ. ಅವರಿಗೆ ವೇತನ, ಪಿಎಫ್‌ ಸೇರಿ ಇನ್ನಿತರ ಸೌಲಭ್ಯವನ್ನು ಆಯಾ ಇಲಾಖೆಗಳು ನೀಡಲಿವೆ. ಆದರೆ, ಅವರು ಸರ್ಕಾರಿ ನೌಕರರಾಗಿರುವುದಿಲ್ಲ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago