ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಐಡಿಗೆ ವಹಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ.
ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರು ನೋಡಿ ಕ್ರಮ ಕೈಗೊಳ್ಳುತ್ತಾರೆ. ಖಾಸಗಿ ಗನ್‌ನಿಂದ ಫೈರಿಂಗ್ ಆಗಿದ್ದು, ತನಿಖೆ ಆದ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ. ಅದಕ್ಕೊಂದು ನಿಯಮವಿದೆ. ಅದನ್ನು ಪೊಲೀಸರು ನಿರ್ವಹಿಸುತ್ತಾರೆ ಎಂದು ಹೇಳಿದರು.





