ರಾಜ್ಯ

ʼಅನ್ನಭಾಗ್ಯʼ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣದ ಬದಲು ಪೂರ್ಣ ಪ್ರಮಾಣದ ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಷ್ಟು ದಿನಗಳ ಕಾಲ 5 ಕೆಜಿ ಅಕ್ಕಿ ಬದಲಿಗೆ 170ರೂ. ಹಣ ನೀಡಲಾಗುತ್ತಿತ್ತು. ಇದೀಗ, ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ನೀಡಿದೆ. ಇದೆ ತಿಂಗಳಿನಿಂದ ಹಣದ ಬದಲು 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಹೇಳಿದರು.

ನಮ್ಮ ಇಲಾಖೆ ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಂದಿಸಿದ್ದು, ಈಗ ಕೇಂದ್ರ ಸಚಿವರು ಅಕ್ಕಿ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಮೊದಲ ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ.ನಂತೆ ಕೊಡಲು ನಿರ್ಧರಿಸಿದೆ ಎಂದು ಹೇಳಿದರು.

ಎಲ್ಲಿಯವರೆಗೆ ಕೇಂದ್ರ ಅಕ್ಕಿ ಕೊಡುತ್ತದೆಯೋ ಅಲ್ಲಿಯವರೆಗೆ ಪೂರ್ಣ ಪ್ರಮಾಣದ ಅಕ್ಕಿ ನೀಡುತ್ತೇವೆ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

11 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

44 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

1 hour ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago