ರಾಜ್ಯ

ಪ್ರತಿ ಟನ್‌ ಕಬ್ಬಿಗೆ 3300 ರೂ. ದರ ನೀಡಲು ಸರ್ಕಾರ ನಿರ್ಧಾರ : ಸಬ್ಸಿಡಿ ಘೋಷಣೆ

ಬೆಂಗಳೂರು : ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ ಕಾರ್ಖಾನೆಯಿಂದ 3250 ರೂ. ನೀಡಬೇಕು, ಉಳಿದಂತೆ ಸರ್ಕಾರದಿಂದ 50 ರೂ. ಸಬ್ಸಿಡಿ ನೀಡಲು ನಿರ್ಧಾರ ಮಾಡಲಾಗಿದೆ.

ಸಿಎಂ ನೇತೃತ್ವದ ಸಭೆಯ ಪ್ರಮುಖ ಅಂಶಗಳೇನು?
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.

ಇದನ್ನೂ ಓದಿ:-ರೈತ ಹೋರಾಟ ಎಫೆಕ್ಟ್‌ : ರಾಜಣ್ಣ ಮನೆಯ ಔತಣಕೂಟ ಮಿಸ್ ಮಾಡ್ಕೊಂಡ ಸಿಎಂ, ಪ್ರವಾಸ ರದ್ದು

ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್ಪಿ ಹೆಚ್ಚಳ ಮಾಡಿಲ್ಲ.

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಿದ್ದೇವೆ.
ಕಬ್ಬಿನ11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.

ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.

ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

6 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago