ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಅಡುಗೆ ತಯಾರಿಕಾ ಸಿಬ್ಬಂದಿ ಗೌರವಧನವನ್ನು ಹೆಚ್ಛಳ ಮಾಡಲು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ವಿಧಾನಸಭೆಯಲ್ಲಿ ಭರವಸೆ ನೀಡಿದರು.
ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಸಾ.ರಾ.ಮಹೇಶ್ ಅವರ ಪ್ರಶ್ನೆಗೆ ಶಿಕ್ಷಣ ಸಚಿವರ ಪರವಾಗಿ ಉತ್ತರಿಸಿದ ಸಚಿವರು, ಅಡುಗೆ ತಯಾರಿಕಾ ಸಿಬ್ಬಂದಿ ಪೈಕಿ ಮುಖ್ಯ ಅಡುಗೆಯವರಿಗೆ 2700ರಿಂದ 3700 ರೂ.ಗೆ ಗೌರವಧನ ಹೆಚ್ಚಿಸಲಾಗಿದೆ. ಬಜೆಟ್ನಲ್ಲಿ ಒಂದು ಸಾವಿರ ರೂ. ಹೆಚ್ಚಳ ಮಾಡಲು ಪ್ರಸ್ತಾಪಿಸಲಾಗಿದೆ ಎಂದರು.
ಗೌರವಧನ ನೀಡುತ್ತಿರುವುದು ಅವರ ಸೇವೆಗೆ ಸೂಕ್ತವಲ್ಲ ಎಂಬ ಭಾವನೆ ಸರ್ಕಾರದ್ದಾಗಿದ್ದು, ಗೌರವಧನ ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಲೆಗಳಲ್ಲಿ 25 ವಿದ್ಯಾರ್ಥಿಗಳಿಗಿಂತ ಕಡಿಮೆ ಇರುವ ಕಡೆಗಳಲ್ಲೂ ಅಡುಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಸಂಬಂಧ ಶಿಕ್ಷಣ ಸಚಿವರ ಗಮನಕ್ಕೆ ತಂದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಸರ್ಕಾರಿ ಶಾಲೆಗಳಲ್ಲಿ ಅಡುಗೆ ತಯಾರಿಕಾ ಸಿಬ್ಬಂದಿ ಗೌರವಧನ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ
Previous Articleಮತದಾನ ಶೇ.100 ರಷ್ಟು ಆಗಬೇಕು: ಪ್ರಾದೇಶಿಕ ಆಯುಕ್ತ ಪ್ರಕಾಶ್