ಹುಬ್ಬಳ್ಳಿ: ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ. ಹಾಗಾಗಿ ಪಿಡಿಓ ಅಧಿಕಾರಿಯನ್ನು ಅಮಾನತ್ತು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಲ್ಲಿ ಭಾಗಿಯಾಗಲು ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವೇ ಅವಕಾಶ ನೀಡಿದೆ. ಆರ್‌ಎಸ್‌ಎಸ್‌ನಲ್ಲಿ ಭಾಗವಹಿಸಲು ರೂಲ್ಸ್ ಇದೆ. ಹೀಗಿದ್ದರೂ ಯಾವುದೇ ಕಾನೂನು ಇಲ್ಲದೇ ನಿಯಮಬಾಹಿರವಾಗಿ ಪಿಡಿಓ ಓರ್ವರನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ. ಸರ್ಕಾರದ ಕ್ರಮ ಸರಿಯಲ್ಲ ಎಂದು ಹೇಳಿದರು.





