ರಾಜ್ಯ

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸಭೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಬರುವುದು
  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು
  • ಎಂಎಸ್‌ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ‘ಸರ್ಕಾರಿ ನೌಕರರ ಕ್ಯಾಂಟೀನ್’

    ಯಾವ ಧಿರಿಸು?
  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು
  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

36 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

1 hour ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

2 hours ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

2 hours ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago