Mysore
17
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಆಡಳಿತ ಮತ್ತು ಸುಧಾರಣಾ ಇಲಾಖೆ (DPAR) ವಿವಿಧ ಇಲಾಖೆಗಳ ಮುಖ್ಯಸ್ಥರು, ಉಪ ಆಯುಕ್ತರು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಪಟ್ಟಿ ಮಾಡಿದೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ:-ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಕಾರ್ಪೊರೇಟ್ ಕಚೇರಿಗಳಿಗಿಂತ ಭಿನ್ನವಾಗಿ, ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದಾಗ್ಯೂ, ಕೆಲವು ಯುವಜನತೆ ಕಾಲೇಜಿಗೆ ಹೋಗುವವರಂತೆ ಬಟ್ಟೆ ಧರಿಸುತ್ತಾರೆ, ಇದು ಸ್ವೀಕಾರಾರ್ಹವಲ್ಲ. ಹರಿದ ಜೀನ್ಸ್, ತೋಳಿಲ್ಲದ ಉಡುಪುಗಳು ಮತ್ತು ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸಿಕೊಂಡು ಬರುತ್ತಾರೆ ಎಂದು ಅಧಿಕಾರಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದರು.

ಚಲನಾ ರಿಜಿಸ್ಟರ್ ನೌಕರರು ಕಚೇರಿಯಲ್ಲಿ ಎಷ್ಟು ಹೊತ್ತು ಇರುತ್ತಾರೆ, ಹೇಗೆ ಕೆಲಸ ಮಾಡುತ್ತಾರೆ ಎಂದು ಪತ್ತೆಹಚ್ಚುವುದಾಗಿರುತ್ತದೆ. ಉದ್ಯೋಗಿ ಬೆಳಗ್ಗೆ 10:10 ರೊಳಗೆ ಕಚೇರಿಯಲ್ಲಿರಬೇಕು ಮತ್ತು ಕೆಲಸದ ಸಮಯ ಮುಗಿಯುವವರೆಗೆ ತಮ್ಮ ಸೀಟಿನಲ್ಲಿರಬೇಕು. ಅಧಿಕೃತ ಕರ್ತವ್ಯದ ಮೇಲೆ ಹೋಗುತ್ತಿದ್ದರೆ ಅದನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಹೇಳುತ್ತದೆ.

Tags:
error: Content is protected !!