ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ಮಾತನ್ನು ಆಡಳಿತ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ. ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ಹೈಕಮಾಂಡ್ ಆಶೀರ್ವಾದ ಮಾಡಿದರೆ ನಾನೇ ಸಿಎಂ ಆಗಿರುತ್ತೇನೆ ಎನ್ನುತ್ತಿದ್ದಾರೆ. ನವೆಂಬರ್ ಕ್ರಾಂತಿ ಎಂದು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಸಚಿವರೇ ಮಾತನಾಡುತ್ತಿದ್ದಾರೆ. ಇದು ತಾರ್ಕಿಕ ಅಂತ್ಯಕ್ಕೆ ಹೋಗುತ್ತದೆ ಎನ್ನುವ ಮುನ್ಸೂಚನೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:-ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ: ಡಿಸಿಎಂ ಡಿಕೆಶಿ





