ರಾಜ್ಯ

ಆಂತರಿಕ ಕಚ್ಚಾಟದಲ್ಲಿ ಸರ್ಕಾರ ಅಭಿವೃದ್ಧಿ ಮರೆತಿದೆ: ಬಿ.ವೈ.ವಿಜಯೇಂದ್ರ

ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ಮಾತನ್ನು ಆಡಳಿತ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ. ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ಹೈಕಮಾಂಡ್‌ ಆಶೀರ್ವಾದ ಮಾಡಿದರೆ ನಾನೇ ಸಿಎಂ ಆಗಿರುತ್ತೇನೆ ಎನ್ನುತ್ತಿದ್ದಾರೆ. ನವೆಂಬರ್‌ ಕ್ರಾಂತಿ ಎಂದು ಕಾಂಗ್ರೆಸ್‌ ಪಕ್ಷದ ಶಾಸಕರು ಹಾಗೂ ಸಚಿವರೇ ಮಾತನಾಡುತ್ತಿದ್ದಾರೆ. ಇದು ತಾರ್ಕಿಕ ಅಂತ್ಯಕ್ಕೆ ಹೋಗುತ್ತದೆ ಎನ್ನುವ ಮುನ್ಸೂಚನೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:-ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್‌ ಚುನಾವಣೆ ಹೊಣೆ: ಡಿಸಿಎಂ ಡಿಕೆಶಿ

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

4 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

5 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

7 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

7 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

9 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

9 hours ago