ಬೆಂಗಳೂರು: ಅನಗತ್ಯ ಹಾಗೂ ಕ್ಷುಲ್ಲಕ ದಾವೆಗಳನ್ನು ಹೊತ್ತು ನ್ಯಾಯಾಲಯದ ಮೆಟ್ಟಿಲು ತುಳಿಯುವ ಸರ್ಕಾರ ನ್ಯಾಯಾಂಗದ ಅಮೂಲ್ಯ ಸಮಯವನ್ನು ವ್ಯಯ ಮಾಡುತ್ತಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.
ನಿವೃತ್ತ ಸಹಾಯಕ ಸಬ್ ಇನ್ಸ್ಪೆಕ್ಟರ್ ಎಂ.ರಹಮತ್ ಉಲ್ಲಾ ವಿರುದ್ಧದ ಪ್ರಕರಣದಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಾಮೂರ್ತಿ ಪಿ.ಎನ್.ದೇಸಾಯಿ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಈ ರೀತಿಯ ವ್ಯಾಜ್ಯಗಳನ್ನು ನಿಯಂತ್ರಿಸದೇ ಇದ್ದರೆ ಯಾವ ಅಧಿಕಾರಿಗಳು ವ್ಯಾಜ್ಯಕ್ಕೆ ಕಾರಣವಾಗುತ್ತಾರೋ ಅಂತಹವರಿಂದಲೇ ದಂಡ ವಸೂಲು ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದೆ.
‘ವ್ಯಾಜ್ಯ ಪರಿಹಾರ ನೀತಿ-೨೦೨೧ ಅನ್ನು ಕಾನೂನು ಇಲಾಖೆ ರೂಪಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಬೇಕು. ಈ ಕುರಿತಂತೆ ರಾಜ್ಯದಲ್ಲಿ ವಿಭಾಗಾವಾರು ಕಾರ್ಯಗಾರಗಳನ್ನು ನಡೆಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿರುವ ನ್ಯಾಯ ಪೀಠ, ನೀತಿ ಸಂಹಿತೆಯ ದಾಖಲೆಯನ್ನು ಎಲ್ಲಾ ಇಲಾಖೆಗಳಿಗೆ ರವಾನಿಸಲು ಕ್ರಮ ಕೈಗೊಳ್ಳುವಂತೆ ಅಡ್ವೊಕೇಟ್ ಜನರಲ್ ಕಚೇರಿಗೂ ನಿರ್ದೇಶಿಸಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleವರ್ಚುವಲ್ ಜಸ್ಟಿಸ್ ಕ್ಲಾಕ್ಗೆ ಪ್ರಧಾನಿ ಚಾಲನೆ
Next Article ಎನ್ಕೌಂಟರ್: ಮೂವರು ನಕ್ಸಲರ ಹತ್ಯೆ