ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು.
ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಳ ಮಾಡಲಾಗಿದೆ.
ಇಂದಿನಿಂದ ಸಚಿವರಿಗೆ ಎಸ್ಕಾರ್ಟ್ ಸಿಬ್ಬಂದಿಯನ್ನು ಗೃಹ ಇಲಾಖೆ ನೀಡಿದೆ.





