ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರ ಬೇಜವಾಬ್ದಾರಿತನದ ನಡೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯೂ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈಗಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೆ ತಮ್ಮ ಬೇಜವಾಬ್ದಾರಿತನ ಮುಂದುವರೆಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಗೌರವಧನ ನೆಚ್ಚಿಕೊಂಡೆ ಜೀವನ ಸಾಗಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸಿಬ್ಬಂದಿಗಳ ವೇತನ ಹೆಚ್ಚಳ, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಗಲು-ರಾತ್ರಿ ಎನ್ನದೇ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಕಾಂಗ್ರೆಸ್‌ ಸರ್ಕಾರ ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ಬೇಜವಬ್ದಾರಿತನ ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸಂಪೂರ್ಣವಾಗಿ ವಿಫಲವಾಗಿದೆ. ಇದನ್ನರಿತು ಇನ್ನಾದರೂ ದಪ್ಪ ಚರ್ಮದ ಕಾಂಗ್ರೆಸ್‌ ಸರ್ಕಾರ ಶ್ರಮಿಕರ ಕಷ್ಟಗಳನ್ನು ನಿವಾರಿಸುವ ಕಡೆಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

5 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

5 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

6 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

7 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

7 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

9 hours ago