ರಾಜ್ಯ

ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಕೆ.ವೆಂಕಟೇಶ್‌

ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ಧವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪಶುವೈದ್ಯಕೀಯ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾಯ್ದೆಯ ಜಾರಿಗೆ ಬದ್ದತೆಯನ್ನು ವ್ಯಕ್ತಪಡಿಸಿದ್ದಾರೆ. ಕುರಿಗಾರರ ಸ್ವತ್ತುಗಳ ರಕ್ಷಣೆ, ಪರಿಹಾರ ಯೋಜನೆಗಳು, ವೈದ್ಯರ ನೇಮಕಾತಿ, ಪೊಲೀಸ್‌ ರಕ್ಷಣೆಗಾಗಿ ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ (ಕಲ್ಯಾಣ ಕ್ರಮಗಳು ಮತ್ತು ದೌರ್ಜನ್ಯ ತಡೆ) ಮಸೂದೆ 2025ರ ಕರಡನ್ನು ಸಿದ್ದಪಡಿಸಲಾಗಿದೆ. ಇದಕ್ಕೆ ಕಾನೂನು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರಡು ವಿಧೇಯಕಕ್ಕೆ ಅನುಮತಿ ಪಡೆದುಕೊಳ್ಳಲಾಗುವುದು. ಅನುಮತಿಯ ನಂತರ ಈ ಬಾರಿಯ ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

4 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

5 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

5 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

5 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

6 hours ago