ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ಧವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪಶುವೈದ್ಯಕೀಯ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾಯ್ದೆಯ ಜಾರಿಗೆ ಬದ್ದತೆಯನ್ನು ವ್ಯಕ್ತಪಡಿಸಿದ್ದಾರೆ. ಕುರಿಗಾರರ ಸ್ವತ್ತುಗಳ ರಕ್ಷಣೆ, ಪರಿಹಾರ ಯೋಜನೆಗಳು, ವೈದ್ಯರ ನೇಮಕಾತಿ, ಪೊಲೀಸ್ ರಕ್ಷಣೆಗಾಗಿ ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ (ಕಲ್ಯಾಣ ಕ್ರಮಗಳು ಮತ್ತು ದೌರ್ಜನ್ಯ ತಡೆ) ಮಸೂದೆ 2025ರ ಕರಡನ್ನು ಸಿದ್ದಪಡಿಸಲಾಗಿದೆ. ಇದಕ್ಕೆ ಕಾನೂನು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರಡು ವಿಧೇಯಕಕ್ಕೆ ಅನುಮತಿ ಪಡೆದುಕೊಳ್ಳಲಾಗುವುದು. ಅನುಮತಿಯ ನಂತರ ಈ ಬಾರಿಯ ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…