ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕೆಎಸ್ಎಫ್‌ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ. ವಿದ್ಯುತ್ ದರ ಹೆಚ್ಟಾಗಿ ಸಣ್ಣ ಕೈಗಾರಿಕೆಗಳು ನೆಲ ಕಚ್ಚಿವೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಅಷ್ಟರ ಮಟ್ಟಿಗೆ ಸರ್ಕಾರ ದಿವಾಳಿ ಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿಯೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ ಎಂದು ಹರಿಹಾಯ್ದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆ ತುಮಕೂರಿಗೆ ಭೇಟಿ ನೀಡಿದ್ದು, ಬರ ವೀಕ್ಷಣೆಗೂ ಮೊದಲು ಸಂವಾದದಲ್ಲಿ ಭಾಗವಹಿಸಿದ್ದಾರೆ. ಯಡಿಯೂರಪ್ಪಗೆ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ, ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ ತಾಲ್ಲೂಕಿನ ಓಜನಕುಂಟೆಯಲ್ಲಿ ಬರ ಅಧ್ಯಯನ ಮಾಡಲಿದ್ದಾರೆ. ನಂತರ ರೈತರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…