ರಾಜ್ಯ

ಪೆನ್‌ಡ್ರೈವ್‌ ಪ್ರಕರಣ: ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ್‌

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದರು.

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago