ರಾಜ್ಯ

ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.

ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿ: ಚಾಮರಾಜನಗರ| ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ

ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5 ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ ಎಂದರು‌.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್‌ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್‌ಗೆ 35 ರೂ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.

ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್‌ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

10 mins ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

1 hour ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

3 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

5 hours ago