ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.
ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನು ಓದಿ: ಚಾಮರಾಜನಗರ| ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ
ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5 ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ ಎಂದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್‌ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್‌ಗೆ 35 ರೂ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.
ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್‌ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…