ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಜು.1 ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹಲವು ದಿನಗಳಿಂದ ಚಾಲನೆಯಲ್ಲಿದ್ದ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ಬಂದಿದ್ದು, ಕೊನೆಗೂ ಸರ್ಕಾರಿ ಆದೇಶ ಹೊರಬಿದ್ದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಹಾರ್ಡ್ ವೇರ್ – ಸಾಪ್ಟ್ ವೇರ್‍ಗಳೂ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣಿಕರಣವನ್ನು ಅವಲಂಬಿಸಿದೆ. ಹಾಡ್ರ್ವೇರ್ ಸಾಧನಗಳಿಗೆ ಆಗಾಗ್ಗೆ ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದೆ. ಇದು ಗಣನೀಯ ವೆಚ್ಚಗಳಿಗೆ ಕಾರಣವಾಗಿತ್ತು. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಂಬಂಧಿ ದೂರ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದು ಸಹಕಾರಿಯಾಗಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಹೊಸ ಸೌಲಭ್ಯದಲ್ಲಿ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ರಾಜ್ಯದ 12 ಸಾವಿರ ಆರೋಗ್ಯ ಸಂಸ್ಥೆಗಳನ್ನೊಳಗೊಂಡು ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಆಡಳಿತದ ಚೌಕಟ್ಟಿನಲ್ಲಿ ಮೊಬೈಲ್ ಹಾಜರಾತಿ ವ್ಯವಸ್ಥೆಯಿದ್ದು, ಇನ್ನು ಮುಂದೆ ವೈದ್ಯರ ಕರಾರುವಕ್ಕಾದ ಲಭ್ಯತೆಯನ್ನು ಸರ್ಕಾರ ಖಾತ್ರಿಪಡಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…