ರಾಜ್ಯ

ಗ್ಯಾರಂಟಿ ಸಮಿತಿಯ ಸದಸ್ಯರಿಗೆ ಸರ್ಕಾರದ ಹಣ: ವಿಪಕ್ಷಗಳಿಂದ ತೀವ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಉಸ್ತುವಾರಿಗೆ ನೇಮಿಸಿರುವ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ, ಸಾರ್ವಜನಿಕರ ಹಣವನ್ನು ಸಂಬಳವಾಗಿ ನೀಡುತ್ತಿರುವುದರ ವಿರುದ್ಧ ವಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಶಾಸಕ ಎಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.

ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಪ್ರಸ್ತಾಪಿಸಿ ಕಾಂಗ್ರೆಸ್‌ ಸಂಬಳ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಇದಕ್ಕೆ ಶಾಸಕ ಸುನೀಲ್‌ ಕುಮಾರ್‌ ಕೂಡ ಧ್ವನಿಗೂಡಿಸಿದರು.

ಈ ವೇಳೆ ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ಡಿಕೆ ಶಿವಕುಮಾರ್‌ ಅಧ್ಯಕ್ಷರಾದ ಮೇಲೆ ಸರ್ಕಾರಕ್ಕೂ, ಕಾಂಗ್ರೆಸ್‌ಗೂ ವ್ಯತ್ಯಾಸವೇ ಇಲ್ಲದಂತಾಗಿದೆ. ಸಾರ್ವಜನಿಕರ ದುಡ್ಡನ್ನು ತೆಗೆದುಕೊಂಡು ಅಲ್ಲಿಗೆ ಹಂಚೋದು ಸರಿಯಲ್ಲ. ಬೇಕಾದರೆ ಭಿಕ್ಷೆ ಬೇಡಿ ಅವರಿಗೆ ದುಡ್ಡು ಕೊಡಲಿ ಎಂದು ಕಿಡಿಕಾರಿದರು.

ಯಾವ ಆಧಾರದ ಮೇಲೆ ನೇಮಕಾತಿ ಮಾಡ್ತೀರಾ? ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇಲ್ಲಿವರೆಗೂ ಯಾವ ಮುಖ್ಯಮಂತ್ರಿಯೂ, ಅಧ್ಯಕ್ಷರು ಈ ಕೆಲಸ ಮಾಡಿರಲಿಲ್ಲ. ಮನೆಹಾಳು ಕೆಲಸ ಮಾಡುತ್ತಿರುವುದು ಇವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, 52 ಸಾವಿರ ಕೋಟಿ ಯೋಜನೆಗಳನ್ನು ನಿರ್ವಹಣೆ ಮಾಡುವುದು ಸುಲಭವಲ್ಲ ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

9 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago