ರಾಜ್ಯ

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

2011ರಿಂದ ಈವರೆಗೆ ಸುಮಾರು 16 ವರ್ಷಗಳ ಅವಧಿಯಲ್ಲಿ 3,200ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳು ನಡೆದಿರುವ ಮಾಹಿತಿಯನ್ನು ಅರಣ್ಯ ಇಲಾಖೆ ಸಂಗ್ರಹಿಸಿದೆ. ಇದು ಕಾಡು ಹಾಗೂ ವನ್ಯಜೀವಿಗಳ ರಕ್ಷಣೆಗೆ ಸವಾಲಿನ ಸನ್ನಿವೇಶವಾಗಿದೆ ಎಂದು ಇಲಾಖೆ ಪರಿಗಣಿಸಿದೆ.

ಹನೂರು ಹಾಗೂ ಸುತ್ತಮುತ್ತಲಿನ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಕಳ್ಳಬೇಟೆ ನಡೆಸುವ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದ್ದು, ವಿವಿಧ ಪ್ರಾಣಿಗಳ ಮಾಂಸವನ್ನು ಬೇಡಿಕೆಯಂತೆ ಪೂರೈಸುವ ವ್ಯವಸ್ಥೆಯನ್ನು ಈ ಗುಂಪು ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಕರೆ ಮಾಡಿ ಬೇಕಾದ ಮಾಂಸವನ್ನು ಪಡೆದುಕೊಳ್ಳುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ ಎನ್ನಲಾಗಿದೆ.

ಕಳ್ಳಬೇಟೆಗಾರರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾದಾಗ ಪ್ರತಿಭಟನೆ ಹಾಗೂ ಮಾನವ ಹಕ್ಕುಗಳ ನೆಪದಲ್ಲಿ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಕೆಲ ಅರಣ್ಯ ಇಲಾಖೆ ಅಧಿಕಾರಿಗಳು ಕಳ್ಳಬೇಟೆಗಾರರಿಗೆ ಸಹಕರಿಸುತ್ತಿದ್ದಾರೆ ಎಂಬ ಆರೋಪವೂ ಇದೆ.

ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಮುಂದಾಗಿದ್ದಾರೆ. ಈಗಾಗಲೇ 3,000ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳ ಮಾಹಿತಿಯನ್ನು ಸಂಗ್ರಹಿಸಿರುವ ಅರಣ್ಯ ಇಲಾಖೆ, ಕಳ್ಳಬೇಟೆಗಾರರ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ.

ಇನ್ನೊಂದೆಡೆ, ಆಲೂರು ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮ್ಯಾಜಿಸ್ಟ್ರೇಟ್‌ ತನಿಖೆಯ ವರದಿ ಇನ್ನೆರಡು ದಿನಗಳಲ್ಲಿ ಸರ್ಕಾರದ ಕೈ ಸೇರುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಪ್ರಕರಣದ ಕುರಿತು ತನಿಖೆ ಆರಂಭಿಸಿದೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

13 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago