Government releases outstanding money Ration truck owners' strike put a stop to strike
ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಿಂಪಡೆದಿದ್ದಾರೆ.
ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ 4 ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದೆ.
ಮುಷ್ಕರ ಕುರಿತು ಮಾತನಾಡಿದ್ದ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಆಹಾರ ಸಚಿವರು ಹಾಗೂ ಅಧಿಕಾರಿಗಳು ಮಾತುಕತೆಗೂ ಕರೆದಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದರು.
ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ನಾಲ್ಕು ತಿಂಗಳಿನ ಬಾಕಿ ಉಳಿಸಿಕೊಂಡಿದ್ದ 244 ಕೋಟಿ ಬಿಡುಗಡೆ ಮಾಡಿದ್ದು, ಪಡಿತರ ಅಕ್ಕಿ ಸಾಗಣೆ ಎಂದಿನಂತೆ ನಡೆಯಲಿ ಎಂದು ಹೇಳಿದೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…