ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶಸಿದೆ.
ಇದೇ ವೇಳೆ, 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ.
ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್: ಸಿನಿಮಾ ಟಿಕೆಟ್ ದರ 200ರೂ ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ
ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ ಮಾತ್ರ ಹಾಲಿ ಪ್ರವಾಸದ ಪ್ರಸ್ತಾವನೆಗೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುತ್ತಿದೆ.
ಈ ವರ್ಷ 2025ನೇ ಸಾಲಿನ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಭಂಧಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.





