ರಾಜ್ಯ

ಎಸ್ಸೆಸ್ಸೆಲ್ಸಿ, ಪಿಯುಸಿ 3 ಪೂರಕ ಪರೀಕ್ಷೆ ಕೈಬಿಟ್ಟ ಸರ್ಕಾರ : 2 ವಾರ್ಷಿಕ ಪರೀಕ್ಷೆಗೆ ಸೀಮಿತ

ಬೆಂಗಳೂರು : ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಹಿಂದೆ ಜಾರಿ ಮಾಡಲಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮೂರು ಪೂರಕ ಪರೀಕ್ಷೆ ಪರಿಕಲ್ಪನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ.

ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ವ್ಯಾಸಂಗದ ಮೇಲೆ ದುಷ್ಟರಿಣಾಮ ಬೀರುತ್ತದೆ ಎಂಬ ಶಿಕ್ಷಣ ತಜ್ಞರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ ಮೂರು ಪರೀಕ್ಷೆಗಳ ಪರಿಕಲ್ಪನೆಯನ್ನು ಕೈಬಿಟ್ಟು ಎರಡು ವಾರ್ಷಿಕ ಪರೀಕ್ಷೆ ನಡೆಸಲು ಮುಂದಾಗಿದೆ.

ಹೀಗಾಗಿ ವಿದ್ಯಾರ್ಥಿಗಳು ಮುಂಬರುವ ಶೈಕ್ಷಣಿಕ ವರ್ಷದಿಂದ ವಾರ್ಷಿಕ ಎರಡು ಪರೀಕ್ಷೆಗಳನ್ನು ಬರೆದು ಉತ್ತೀರ್ಣವಾಗಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಉತ್ತೀರ್ಣ ಅಂಕ ಇಳಿಕೆ ಮಾಡಿರುವ ಕಾರಣಕ್ಕೆ ಒಂದು ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷೆಗಳ ಉತ್ತೀರ್ಣ ಅಂಕಗಳನ್ನು ಶೇಕಡಾ ೩೫ರಿಂದ ಶೇಕಡಾ ೩೩ಕ್ಕೆ ಇಳಿಕೆ ಮಾಡಲಾಗಿದೆ. ಹೀಗಾಗಿ ಮೂರು ಪರೀಕ್ಷೆಗಳ ಅಗತ್ಯವಿಲ್ಲ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಈಗಾಗಲೇ ೨೦೨೫-೨೦೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-೧ ಮತ್ತು ೨ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚಿಸುವ ದೃಷ್ಟಿಯಿಂದ ೨೦೨೩-೨೪ರಲ್ಲಿ ಜಾರಿಗೆ ತಂದ ವರ್ಷಕ್ಕೆ ಮೂರು ಪರೀಕ್ಷೆ ಗಳನ್ನು ನಡೆಸುವ ಪ್ರಯೋಗ ಸತತ ೨ನೇ ವರ್ಷವೂ ಫಲಿತಾಂಶ ಕುಸಿತದೊಂದಿಗೆ ವಿಫಲವಾಗಿತ್ತು. ಇದರಿಂದ ಈ ಮೂರು ಪರೀಕ್ಷೆ ಗಳ ಅಗತ್ಯ ಬಗ್ಗೆಯೇ ಪ್ರಶ್ನೆ ಹುಟ್ಟುವಂತೆ ಮಾಡಿತ್ತು. ೨೦೨೨-೨೩ನೇ ಸಾಲಿನ ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯ ಕ್ರೋಢೀಕೃತ ಫಲಿತಾಂಶಕ್ಕೆ(ಶೇ.೮೭) ಹೋಲಿಸಿದರೆ ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿಯ ಮೂರೂ ಪರೀಕ್ಷೆಗಳ ಒಟ್ಟಾರೆ ಫಲಿತಾಂಶ, ಶೇ.೮೧.೬ರಷ್ಟು ದಾಖಲಾಗಿ ಸುಮಾರು ಶೇ.೬ರಷ್ಟು ಕಡಿಮೆಯಾಗಿತ್ತು. ೨೦೨೪-೨೫ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ ೮,೬೮,೩೮೫ ವಿದ್ಯಾರ್ಥಿಗಳಲ್ಲಿ ೬,೪೫,೨೭೩ ಮಂದಿ ಉತ್ತೀರ್ಣರಾಗಿದ್ದು ಶೇ.೭೪.೩೧ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ ಶೇ.೭.೩ರಷ್ಟು ಇಳಿಕೆಯಾಗಿದೆ.

ಇನ್ನು, ದ್ವಿತೀಯ ಪಿಯುಸಿಯಲ್ಲಿ ಕಳೆದ ಬಾರಿ ಶೇ.೪ರಷ್ಟು ಏರಿಕೆಯಾಗಿದ್ದ ಕ್ರೋಢೀಕೃತ ಫಲಿತಾಂಶ ಈ ಬಾರಿ ೪.೭೮ರಷ್ಟು ಕಡಿಮೆಯಾಗಿದೆ. ಮೂರೂ ಪರೀಕ್ಷೆಗಳಿಗೆ ಒಟ್ಟು ೬,೩೯,೮೦೦ ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ ೫,೪೫,೦೩೨ ಮಂದಿ ಉತ್ತೀರ್ಣರಾಗುವ ಮೂಲಕ ಶೇ.೮೫.೧೯ರಷ್ಟು ಫಲಿತಾಂಶ ಬಂದಿದೆ. ಇದರಿಂದ ಮೂರು ಪರೀಕ್ಷೆಗಳ ಪ್ರಯೋಗ ಯಶಸ್ವಿಯಾಗಿಲ್ಲ. ಇದನ್ನು ಮುಂದುವರಿಸಬೇಕಾ ಬೇಡವಾ ಎನ್ನುವ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ ಎನ್ನುವ ಅಭಿಪ್ರಾಯ ಶಿಕ್ಷಣ ಕ್ಷೇತ್ರದಲ್ಲಿ ಕೇಳಿಬಂದಿತ್ತು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿಯ ಮೊದಲನೇ ಮತ್ತು ಎರಡನೇ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು ೨೦೨೬ರ ಫೆಬ್ರವರಿ ೨೮ ರಂದು ಪ್ರಾರಂಭವಾಗಲಿದ್ದು, ಮಾರ್ಚ್ ೧೭ ರಂದು ಮುಕ್ತಾಯಗೊಳ್ಳಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ೨೦೨೬ರ ಮಾರ್ಚ್ ೧೮ರಂದು ಆರಂಭವಾಗಿ ಏಪ್ರಿಲ್ ೨ರವರೆಗೆ ನಡೆಯುಲಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

30 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

32 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

34 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago