Mysore
24
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಜವಾಬ್ದಾರಿಯನ್ನು ಹೊರಗುತ್ತಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿದರೆ ವಾರಗಟ್ಟಲೇ ಶಾಲೆಗಳಲ್ಲಿ ಮಕ್ಕಳಿಗೆ ಪಾಠಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸ್ಪಷ್ಟನೆ ನೀಡಲಾಗಿದೆ. ಹೀಗಾಗಿ ಜಾತಿಗಣತಿ ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!