Mysore
23
haze

Social Media

ಭಾನುವಾರ, 04 ಜನವರಿ 2026
Light
Dark

ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

mahesh joshi

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.

ಕೆಲ ಸಾಹಿತಿಗಳು ಮಹೇಶ್‌ ಜೋಶಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದ ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸ್ಥಾನದಿಂದ ಮಹೇಶ್‌ ಜೋಶಿ ಅವರನ್ನು ಕೆಳಗಿಳಿಸಬೇಕು ಎಂದು ಮನವಿ ಮಾಡಿದ್ದರು.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್‌ ಅವರು ಆದೇಶ ಹೊರಡಿಸಿದ್ದಾರೆ.

Tags:
error: Content is protected !!