ಮಂಗಳೂರು : ಕಾಂಗ್ರೆಸ್ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್ ನಡೆದಿದೆ ಎಂದು ಹೇಳಿದ್ದಾರೆ.
ಮುಂದೆಯೂ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದೆ. ಹಾಗಾಗಿ ಕಾಂಗ್ರೆಸ್ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ ಕೇಸ್ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್ಐಆರ್ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್ಗಳು ಜಾಸ್ತಿಯಾಗುತ್ತಿವೆ. ಆದರೆ ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.
ಮಂಡ್ಯ: ಸಕ್ಕರೆ ನಗರಿಯಲ್ಲಿ ಶುಕ್ರವಾರ ಆಕ್ಷರಶಃ ದೊಡ್ಡ ಜಾತ್ರೆಯ ಸೊಬಗು ಮನೆ ಮಾಡಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ; ಅದು…
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…