ರಾಜ್ಯ

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಅಧಿಕಾರಿಗಳ ಮನವೊಲಿಕೆಗೆ ಸಾರಿಗೆ ಸಂಘಟನೆಗಳು ಸುತಾರಾಂ ಒಪ್ಪಿಗೆ ನೀಡಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರುವಂತೆ ಅಧಿಕಾರಿಗಳು ಹೇಳಿದ್ದರೂ ಮುಖಂಡರು ಒಪ್ಪಿಗೆ ನೀಡಲಿಲ್ಲ. ನಾಳೆ ಮಧ್ಯಾಹ್ನದ ಒಳಗಾಗಿ ಸಭೆ ಕರೆದು ಬೇಡಿಕೆ ಈಡೇರಿಕೆ ಸಂಬಂಧ ಮಾತನಾಡುವಂತೆ ಆಗ್ರಹಿಸಿದರು. ಇದಕ್ಕೆ ಅಧಿಕಾರಿಗಳು ಸರ್ಕಾರ ಸದ್ಯದ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.

ಪಟ್ಟು ಸಡಿಲಿಸದ ಸಾರಿಗೆ ನೌಕರ ಸಂಘಟನೆ ಮುಖಂಡರು ನಾಳೆ ಮಧ್ಯರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತಕ್ಕೆ ತೀರ್ಮಾನಿಸಿದ್ದಾರೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಸ್ ಬಂದ್‌ನಿಂದ ಸಾರ್ವಜನಿಕರಿಗೆ ಭಾರೀ ತೊಂದರೆಯಾಗುವ ಆತಂಕ ಎದುರಾಗಿದೆ. ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳತ್ತೇವೆ ಎಂದು ಪ್ರಯಾಣಿಕರಿಗೆ ಅಭಯ ನೀಡಿದ್ದಾರೆ. ಇತ್ತ ಎಸ್‌ಸಿ, ಎಸ್‌ಟಿ ನೌಕರರ ಸಂಘ ಮುಷ್ಕರದಿಂದ ಹೊರ ಬಂದಿದ್ದು, ಮುಷ್ಕರದಲ್ಲಿ ಭಾಗಿಯಾಗುವುದಿಲ್ಲ. ಇಲಾಖೆಯ ಆದೇಶದಂತೆ ನಡೆದುಕೊಳ್ತೇವೆ ಎಂದು ಹೇಳಿದೆ

 

ಬೇಡಿಕೆ ಏನು?

  • ಶೇ.25 ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗೆ ಸರ್ಕಾರ ಕೊಟ್ಟಿದ್ದು 12.5 ಮಾತ್ರ
  • 2024ರ ಜನವರಿಯಿಂದ ಶೇ.25ರಷ್ಟು ವೇತನ ನೀಡಬೇಕು. ಬಾಕಿ ವೇತನ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗಬೇಕು
  • 26 ತಿಂಗಳ ಬಾಕಿ ವೇತನ ಒಂದೇ ಕಂತಿನಲ್ಲಿ ಕೊಡಬೇಕು,ಭತ್ಯೆ ಹೆಚ್ಚಳ ಮಾಡಬೇಕು
  • ಕೋವಿಡ್‌ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ
  • 26 ತಿಂಗಳ ಬಾಕಿ ಹಣ 1,272 ಕೋಟಿ ರಿಲೀಸ್ ಮಾಡಬೇಕು
ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago