ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಸೇರಿದೆ.
2023ರ ಜೂನ್.11ರಿಂದ ಜುಲೈ.25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದಲೇ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಗೌರವ ಸಮರ್ಪಿಸುತ್ತೇವೆ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ನೌಕರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.




