Thawar Chand Gehlot letter
ಬೆಂಗಳೂರು: ನಿಗದಿಯಂತೆ ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತಿ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸಮೀಕ್ಷೆಯಲ್ಲಿ ರಾಜ್ಯದ ಜಾತಿ ಪಟ್ಟಿಯಲ್ಲಿ ಇಲ್ಲದ ಮತ್ತು ಕ್ರೈಸ್ತ ಧರ್ಮದಲ್ಲಿ ಇಲ್ಲದ ಜಾತಿಗಳನ್ನು ಸೇರ್ಪಡೆ ಮಾಡಿರುವುದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ ಮಾಡಿದ್ದಾರೆ.
ಸೆ.16ರಂದು ಬಿಜೆಪಿ ಸಂಸದರು ಹಾಗೂ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಮನವಿಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.
ಕುಂಬಾರ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಹೀಗೆ ಹೊಸ ಜಾತಿಗಳನ್ನು ಉಲ್ಲೇಖಿಸಿ ಕ್ರೈಸ್ತ ಧರ್ಮದಲ್ಲಿ ಜಾತಿ ಮಾನ್ಯತೆ ನೀಡುವ ಈ ಕ್ರಮವೂ ಸಾಮಾಜಿಕ ಅಶಾಂತಿಯ ಜೊತೆಗೆ ದೀರ್ಘಾವಧಿಯಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಅಪಾಯ ತರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಮೀಕ್ಷೆಯಲ್ಲಿ ರಾಜ್ಯದ ಜಾತಿ ಪಟ್ಟಿ ಇಲ್ಲದ ಹಾಗೂ ಕ್ರೈಸ್ತ ಧರ್ಮದಲ್ಲಿ ಇಲ್ಲದ ಜಾತಿಗಳನ್ನು ಸೇರ್ಪಡೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…