ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.
ಕಳೇದ ಡಿಸೆಂಬರ್‍ನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತು. ಮೀಸಲಾತಿ ಸೌಲಭ್ಯಗಳ ನ್ಯಾಯಯುತ ಮತ್ತು ಸಮಾನ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿಗಳ ವಿವಿಧ ಉಪ ಪಂಗಡಗಳ ನಡುವೆ 6:6:5 ಅನುಪಾತದಲ್ಲಿ ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿದ ಮೀಸಲಾತಿ ಕೋಟಾವನ್ನು ವಿಭಜಿಸಲಾಗಿತ್ತು. ಈ ಮಸೂದೆಗೆ ಅಂಕಿತ ಕೋರಿ ಕಳೆದ ವಾರ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಮಸೂದೆಗೆ ಹೆಚ್ಚಿನ ಸ್ಪಷ್ಟೀಕರಣ ಕೋರಿ ಅವರಿಗೆ ವಾಪಸ್ ಕಳುಹಿಸಿದ್ದಾರೆ.
ಈ ಬೆಳವಣಿಗೆಯು ಸರ್ಕಾರದ ಹಲವು ಇಲಾಖೆಗಳ ನೇಮಕಾತಿ ಮೇಲೆ ಪರಿಣಾಮ ಬೀರಲಿದೆ. ಈ ಮಸೂದೆ ಪ್ರಕ್ರಿಯೆ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಕಾದು ಕುಳಿತಿದ್ದು, ಇದೀಗ ಇದು ಮತ್ತಷ್ಟು ವಿಳಂಬವಾಗಲಿದೆ. ಮೂಲಗಳ ಪ್ರಕಾರ, ಸರ್ಕಾರ ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣಕ್ಕೆ ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 30 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಮಾಡಲಿದೆ.
ಸರ್ಕಾರ 2024ರ ಅಕ್ಟೋಬರ್‍ನಿಂದ ನೇಮಕಾತಿಯನ್ನು ನೆನಗುದಿಯಲ್ಲಿಟ್ಟಿದ್ದು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ ಏಕವ್ಯಕ್ತಿ ಆಯೋಗವು ಪರಿಶಿಷ್ಟ ಜಾತಿಗಳ ವಿವಿಧ ಉಪ – ಗುಂಪುಗಳಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ನೀಡಿದ ನಿರ್ದಿಷ್ಟ ಶಿಫಾರಸುಗಳನ್ನು ನೇಮಕಾತಿಯಲ್ಲಿ ಜಾರಿಗೆ ತರಲು ಕಾದಿದೆ. ಆಂತರಿಕ ಕೋಟಾ ಸಮಸ್ಯೆಯನ್ನು ಪರಿಹರಿಸದೇ ನೇಮಕಾತಿಗಳೊಂದಿಗೆ ಮುಂದುವರಿಯುವುದರಿಂದ ಈ ಸಮುದಾಯಗಳ ಯುವಕರಿಗೆ ನಷ್ಟವಾಗಲಿದೆ ಎಂದು ಎಸ್‍ಸಿ-ಎಸ್ಟಿ ಸಮುದಾಯಗಳ ಬೇಡಿಕೆಯಿಂದಾಗಿ ಸರ್ಕಾರ ಈ ನೇಮಕಾತಿಗಳನ್ನು ಸ್ಥಗಿತಗೊಳಿಸಿದೆ.
ಎಸ್‍ಸಿ ಒಳಮೀಸಲಾತಿ ಕುರಿತು ಆಯೋಗ 2024ರ ಆಗಸ್ಟ್ 4ರಂದು ವರದಿ ಮಂಡಿಸಿದ್ದು, ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಅದನ್ನು ಸ್ವೀಕರಿಸಿತ್ತು. 2025ರ ಅಕ್ಟೋಬರ್‍ನಲ್ಲಿ ಎಸ್‍ಸಿ ಒಳಮೀಸಲಾತಿ ಕೋಟಾವನ್ನು ಕೂಡಾ ಸೂಚಿಸಿತ್ತು. ಆದರೆ, ಇದುವರೆಗೂ ಸರ್ಕಾರ ಎಸ್‍ಸಿಗಳಲ್ಲಿ ವರ್ಗಗಳನ್ನು ಗುರುತಿಸಲು ಜಾತಿ ಪ್ರಮಾಣಪತ್ರಗಳನ್ನು ನೀಡುವ ಮಾರ್ಗಸೂಚಿಗಳನ್ನು ಅದು ಹೊರಡಿಸಿಲ್ಲ. ಈ ನಡುವೆ ಒಳಮೀಸಲಾತಿ ಸೂಚಿಸುವ ಆದೇಶಕ್ಕೆ ಕಾನೂನು ಬದ್ಧತೆ ನೀಡುವ ಮಸೂದೆಯನ್ನು ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಹೆಚ್ಚಿನ ಸ್ಪಷ್ಟೀಕರಣಗಳನ್ನು ಕೋರಿ ಮಸೂದೆಯನ್ನು ಹಿಂದಿರುಗಿಸಿರುವುದರಿಂದ, ನೇಮಕಾತಿಗಳು ಮತ್ತಷ್ಟು ವಿಳಂಬವಾಗುತ್ತವೆ.
27 ಲಕ್ಷ ಖಾಲಿ ಹುದ್ದೆಗಳು
ಸರ್ಕಾರದಲ್ಲಿ ಅತಿ ಹೆಚ್ಚು ಉದ್ಯೋಗ ನೇಮಕಾತಿ ನಡೆಸದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ನೀಡಿದ ಅಂಕಿ ಅಂಶದ ಪ್ರಕಾರ ರಾಜ್ಯದ 43 ಇಲಾಖೆಯ 2.73 ಲಕ್ಷ ಉದ್ಯೋಗಗಳು ಖಾಲಿ ಇದ್ದು, ಶಿಕ್ಷಣ ಇಲಾಖೆಯಲ್ಲಿ 70,000 ಹಾಗೂ ಆರೋಗ್ಯ ಇಲಾಖೆಯಲ್ಲಿ 35,000 ಹಾಗೂ ಗೃಹ ಇಲಾಖೆಯಲ್ಲಿ 23,500 ಹುದ್ದೆಗಳು ಖಾಲಿ ಇವೆ.
ಈ ಖಾಲಿ ಹುದ್ದೆಗಳು ಭರ್ತಿಯಾಗದೇ ಹಲವು ವರ್ಷಗಳಿಂದ ಹಾಗೇ ಇದ್ದು, ಸರ್ಕಾರ ಇವುಗಳಲ್ಲಿ ಕೆಲವನ್ನಾದರೂ ಭರ್ತಿ ಮಾಡುವ ಒತ್ತಡದಲ್ಲಿದೆ. ಈ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ತಿಂಗಳು ಧಾರವಾಡದಲ್ಲಿ ಸಾವಿರಾರು ಯುವಕರು ಬೃಹತ್ ಪ್ರತಿಭಟನೆ ನಡೆಸಿದ್ದು, ತಮ್ಮ ಬೇಡಿಕೆ ಈಡೇರುವವರೆಗೆ ಸರ್ಕಾರದ ಮೇಲೆ ಒತ್ತಡ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದರು.
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…