ರಾಜ್ಯ

ಒಳ ಮೀಸಲಾತಿ ಮಸೂದೆಗೆ ಅಂಕಿತ ಹಾಕದ ರಾಜ್ಯಪಾಲರು : ನೇಮಕಾತಿ ಮತ್ತಷ್ಟು ವಿಳಂಬ

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಕಳೇದ ಡಿಸೆಂಬರ್‍ನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತು. ಮೀಸಲಾತಿ ಸೌಲಭ್ಯಗಳ ನ್ಯಾಯಯುತ ಮತ್ತು ಸಮಾನ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿಗಳ ವಿವಿಧ ಉಪ ಪಂಗಡಗಳ ನಡುವೆ 6:6:5 ಅನುಪಾತದಲ್ಲಿ ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿದ ಮೀಸಲಾತಿ ಕೋಟಾವನ್ನು ವಿಭಜಿಸಲಾಗಿತ್ತು. ಈ ಮಸೂದೆಗೆ ಅಂಕಿತ ಕೋರಿ ಕಳೆದ ವಾರ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಮಸೂದೆಗೆ ಹೆಚ್ಚಿನ ಸ್ಪಷ್ಟೀಕರಣ ಕೋರಿ ಅವರಿಗೆ ವಾಪಸ್ ಕಳುಹಿಸಿದ್ದಾರೆ.

ಈ ಬೆಳವಣಿಗೆಯು ಸರ್ಕಾರದ ಹಲವು ಇಲಾಖೆಗಳ ನೇಮಕಾತಿ ಮೇಲೆ ಪರಿಣಾಮ ಬೀರಲಿದೆ. ಈ ಮಸೂದೆ ಪ್ರಕ್ರಿಯೆ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಕಾದು ಕುಳಿತಿದ್ದು, ಇದೀಗ ಇದು ಮತ್ತಷ್ಟು ವಿಳಂಬವಾಗಲಿದೆ. ಮೂಲಗಳ ಪ್ರಕಾರ, ಸರ್ಕಾರ ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣಕ್ಕೆ ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 30 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಮಾಡಲಿದೆ.

ಸರ್ಕಾರ 2024ರ ಅಕ್ಟೋಬರ್‍ನಿಂದ ನೇಮಕಾತಿಯನ್ನು ನೆನಗುದಿಯಲ್ಲಿಟ್ಟಿದ್ದು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ ಏಕವ್ಯಕ್ತಿ ಆಯೋಗವು ಪರಿಶಿಷ್ಟ ಜಾತಿಗಳ ವಿವಿಧ ಉಪ – ಗುಂಪುಗಳಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ನೀಡಿದ ನಿರ್ದಿಷ್ಟ ಶಿಫಾರಸುಗಳನ್ನು ನೇಮಕಾತಿಯಲ್ಲಿ ಜಾರಿಗೆ ತರಲು ಕಾದಿದೆ. ಆಂತರಿಕ ಕೋಟಾ ಸಮಸ್ಯೆಯನ್ನು ಪರಿಹರಿಸದೇ ನೇಮಕಾತಿಗಳೊಂದಿಗೆ ಮುಂದುವರಿಯುವುದರಿಂದ ಈ ಸಮುದಾಯಗಳ ಯುವಕರಿಗೆ ನಷ್ಟವಾಗಲಿದೆ ಎಂದು ಎಸ್‍ಸಿ-ಎಸ್ಟಿ ಸಮುದಾಯಗಳ ಬೇಡಿಕೆಯಿಂದಾಗಿ ಸರ್ಕಾರ ಈ ನೇಮಕಾತಿಗಳನ್ನು ಸ್ಥಗಿತಗೊಳಿಸಿದೆ.

ಎಸ್‍ಸಿ ಒಳಮೀಸಲಾತಿ ಕುರಿತು ಆಯೋಗ 2024ರ ಆಗಸ್ಟ್ 4ರಂದು ವರದಿ ಮಂಡಿಸಿದ್ದು, ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಅದನ್ನು ಸ್ವೀಕರಿಸಿತ್ತು. 2025ರ ಅಕ್ಟೋಬರ್‍ನಲ್ಲಿ ಎಸ್‍ಸಿ ಒಳಮೀಸಲಾತಿ ಕೋಟಾವನ್ನು ಕೂಡಾ ಸೂಚಿಸಿತ್ತು. ಆದರೆ, ಇದುವರೆಗೂ ಸರ್ಕಾರ ಎಸ್‍ಸಿಗಳಲ್ಲಿ ವರ್ಗಗಳನ್ನು ಗುರುತಿಸಲು ಜಾತಿ ಪ್ರಮಾಣಪತ್ರಗಳನ್ನು ನೀಡುವ ಮಾರ್ಗಸೂಚಿಗಳನ್ನು ಅದು ಹೊರಡಿಸಿಲ್ಲ. ಈ ನಡುವೆ ಒಳಮೀಸಲಾತಿ ಸೂಚಿಸುವ ಆದೇಶಕ್ಕೆ ಕಾನೂನು ಬದ್ಧತೆ ನೀಡುವ ಮಸೂದೆಯನ್ನು ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಹೆಚ್ಚಿನ ಸ್ಪಷ್ಟೀಕರಣಗಳನ್ನು ಕೋರಿ ಮಸೂದೆಯನ್ನು ಹಿಂದಿರುಗಿಸಿರುವುದರಿಂದ, ನೇಮಕಾತಿಗಳು ಮತ್ತಷ್ಟು ವಿಳಂಬವಾಗುತ್ತವೆ.

27 ಲಕ್ಷ ಖಾಲಿ ಹುದ್ದೆಗಳು
ಸರ್ಕಾರದಲ್ಲಿ ಅತಿ ಹೆಚ್ಚು ಉದ್ಯೋಗ ನೇಮಕಾತಿ ನಡೆಸದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ನೀಡಿದ ಅಂಕಿ ಅಂಶದ ಪ್ರಕಾರ ರಾಜ್ಯದ 43 ಇಲಾಖೆಯ 2.73 ಲಕ್ಷ ಉದ್ಯೋಗಗಳು ಖಾಲಿ ಇದ್ದು, ಶಿಕ್ಷಣ ಇಲಾಖೆಯಲ್ಲಿ 70,000 ಹಾಗೂ ಆರೋಗ್ಯ ಇಲಾಖೆಯಲ್ಲಿ 35,000 ಹಾಗೂ ಗೃಹ ಇಲಾಖೆಯಲ್ಲಿ 23,500 ಹುದ್ದೆಗಳು ಖಾಲಿ ಇವೆ.

ಈ ಖಾಲಿ ಹುದ್ದೆಗಳು ಭರ್ತಿಯಾಗದೇ ಹಲವು ವರ್ಷಗಳಿಂದ ಹಾಗೇ ಇದ್ದು, ಸರ್ಕಾರ ಇವುಗಳಲ್ಲಿ ಕೆಲವನ್ನಾದರೂ ಭರ್ತಿ ಮಾಡುವ ಒತ್ತಡದಲ್ಲಿದೆ. ಈ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ತಿಂಗಳು ಧಾರವಾಡದಲ್ಲಿ ಸಾವಿರಾರು ಯುವಕರು ಬೃಹತ್ ಪ್ರತಿಭಟನೆ ನಡೆಸಿದ್ದು, ತಮ್ಮ ಬೇಡಿಕೆ ಈಡೇರುವವರೆಗೆ ಸರ್ಕಾರದ ಮೇಲೆ ಒತ್ತಡ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

35 mins ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

45 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

5 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

5 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

5 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

5 hours ago